ಮುದ್ದು ವಿದ್ಯಾರ್ಥಿಗಳೇ, ನಿಮಗೆಲ್ಲರಿಗೂ ಗುಬ್ಬಚ್ಚಿಗಳ ಚಿಲಿಪಿಲಿ ಬ್ಲಾಗಿಗೆ ಹಾರ್ದಿಕ ಸ್ವಾಗತ! ಸುಸ್ವಾಗತ!!

2022 ರಲ್ಲಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ, ನವೆಂಬರ 1 ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

             2022 ರಲ್ಲಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ, ನವೆಂಬರ 1 ರಂದು ರಾಜ್ಯೋತ್ಸವ 

                                              ಪ್ರಶಸ್ತಿ ಪ್ರದಾನ ಸಮಾರಂಭ

            ಕರ್ನಾಟಕ ಸರಕಾರ ಸದರೀ ವರುಷದ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಸಾಧಕರ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಇವರಲ್ಲಿ ಚಿತ್ರನಟರಾದ ದತ್ತಾತ್ರೇಯ (ದತ್ತಣ್ಣ), ಅವಿನಾಶ್‌, ಸಿಹಿಕಹಿ ಚಂದ್ರು, ಸೋಲಿಗರಲ್ಲಿ ಸಹಕಾರ ಸಂಸ್ಥೆಗಳ ಕುರಿತು ಅರಿವು ಮೂಡಿಸಿದ ಸೋಲಿಗರ ಮಾದಮ್ಮ, ರಾಮನಗರದ ಸಾಲುಮರದ ನಿಂಗಣ್ಣ, ಉಡುಪಿ ಜಿಲ್ಲೆಯ ದೈವ ನರ್ತಕ ಗುಡ್ಡ ಪಾಣಾರ, ಯಕ್ಷಗಾನ ಕಲಾವಿದರಾದ ಎಂ. ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ಪತ್ರಕರ್ತರಾದ ಎಚ್‌.ಆರ್‌. ಶ್ರೀಶ, ಜಿ.ಎಂ. ಶಿರಹಟ್ಟಿ ಪುರಸ್ಕೃತರಲ್ಲಿ ಸೇರಿದ್ದಾರೆ. 


ಸಂಕೀರ್ಣ ಕ್ಷೇತ್ರ :
ಸುಬ್ಬರಾಮ ಶೆಟ್ಡಿ - ಬೆಂಗಳೂರು
ವಿದ್ವಾನ್ ಗೋಪಾಲ ಕೃಷ್ಣ ಶರ್ಮಾ - ಬೆಂಗಳೂರು
ಶ್ರೀಮತಿ ಸೋಲಿಗರ ಮಾದಮ್ಮ - ಚಾಮರಾಜನಗರ
ಕೃಷಿ‌ ಕ್ಷೇತ್ರ
ಗಣೇಶ್ ತಿಮ್ಮಯ್ಯ - ಕೊಡಗು
ಚಂದ್ರಶೇಖರ್ ನಾರಯಣಪುರ - ಚಿಕ್ಕಮಗಳೂರು
ವಿಜ್ಞಾನ ತಂತ್ರಜ್ಞಾನ
ಕೆ.ಶಿವನ್ - ಬೆಂಗಳೂರು
ಡಾ.ಡಿ.ಆರ್.ಬಳೂರಗಿ - ರಾಯಚೂರು
ಪತ್ರಿಕೋದ್ಯಮ
ಎಚ್ ಆರ್ ಶ್ರೀಶಾ - ಬೆಂಗಳೂರು
ಜಿ.ಎಂ.ಶಿರಹಟ್ಟಿ ‌- ಗದಗ
ಸೈನಿಕ ಕ್ಷೇತ್ರ
ಸು‌ಬೇದಾರ್ ಬಿ.ಕೆ ಕುಮಾರಸ್ವಾಮಿ - ಬೆಂಗಳೂರು
ಯಕ್ಷಗಾನ ಕ್ಷೇತ್ರ
ಸುಬ್ರಹ್ಮಣ್ಯ ಧಾರೇಶ್ವರ - ಉತ್ತರ ಕನ್ನಡ

ಹೊರರಾಜ್ಯ ಕನ್ನಡಿಗರು ಮಾತ್ರ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. 

10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹತ್ತು ಸಮಾಜ ಸೇವಾ ಸಂಘಟನೆಗಳನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೈಸೂರಿನ ರಾಮಕೃಷ್ಣ ಆಶ್ರಮ, ಬೆಂಗಳೂರಿನ ಅಮೃತ ಶಿಶು ನಿವಾಸ, ಸುಮನಾ ಫೌಂಡೇಶನ್‌, ಹಾವೇರಿಯ ಅಗಡಿ ತೋಟ, ಗದಗ ಜಿಲ್ಲೆಯ ಲಿಂಗಾಯತ ಪ್ರಗತಿಶೀಲ ಸಂಸ್ಥೆ ಸೇರಿದಂತೆ ಹತ್ತು ಸಾಮಾಜಿಕ ಸಂಘಟನೆಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ನಗದು, 25 ಗ್ರಾಂ. ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.


ಪುನೀತ್ ರಾಜಕುಮಾರ್​ಗೆ ಕರ್ನಾಟಕ ರತ್ನ


ಸ್ಯಾಂಡಲ್​ವುಡ್​ ನಟ ಯುವಕರ ಕಣ್ಮಣಿ, ಯುವಾ ಚೇತನ ಪವರ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡುವುದಾಗಿ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜೂನಿಯರ್ ಎನ್‍ಟಿಆರ್ (NTR) ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್  (Rajinikanth) ಸಹ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು